HomeLatest NewsBREAKING : ದೇವನಹಳ್ಳಿ ರೈತರ ಹೋರಾಟಕ್ಕೆ ಅತಿ ದೊಡ್ಡ ಜಯ : ಭೂಸ್ವಾಧೀನ ಕೈ...

BREAKING : ದೇವನಹಳ್ಳಿ ರೈತರ ಹೋರಾಟಕ್ಕೆ ಅತಿ ದೊಡ್ಡ ಜಯ : ಭೂಸ್ವಾಧೀನ ಕೈ ಬಿಡಲು ರಾಜ್ಯ ಸರ್ಕಾರ ನಿರ್ಧಾರ.!

ಬೆಂಗಳೂರು : ದೇವನಹಳ್ಳಿ ರೈತರ ಹೋರಾಟಕ್ಕೆ ಅತಿ ದೊಡ್ಡ ಜಯ ಸಿಕ್ಕಿದ್ದು, ಭೂಸ್ವಾಧೀನ ಕೈ ಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ವಿಧಾನಸೌಧದಲ್ಲಿ ರೈತರ ಜೊತೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕೊನೆಗೂ ರೈತರ ಹೋರಾಟಕ್ಕೆ ಮಣಿದ ಸರ್ಕಾರ ಭೂಸ್ವಾಧೀನ ಕೈ ಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಭೂಮಾಲೀಕರು ಸ್ವಯಂಪ್ರೇರಿತವಾಗಿ ಜಮೀನು ನೀಡಲು ಮುಂದಾದರೆ ಮಾತ್ರ ಖರೀದಿಸಿ . ಬಲವಂತವಾಗಿ ಪಡೆದುಕೊಳ್ಳಬೇಡಿ ಎಂದು CM ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದೇವನಹಳ್ಳಿಯಲ್ಲಿ ರೈತರ ಭೂಮಿ ಸ್ವಾಧೀನ ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದರು. .ಇತ್ತೀಚೆಗೆ ರೈತರು ತಾವು ಬೆಳೆದ ಬೆಳೆ, ತರಕಾರಿ, ಹೂವು, ಹಣ್ಣುಗಳ ಬುಟ್ಟಿ ಸಮೇತ ವಿಧಾನಸೌಧಕ್ಕೆ ಆಗಮಿಸಿದ ರೈತರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತರ ಜಮೀನು ಸಾಧೀನ ಪಡಿಸಿಕೊಳ್ಳದಂತೆ ಮನವಿ ಮಾಡಿದ್ದರು.
ದೇವನಹಳ್ಳಿ ಭಾಗದ 13 ಹಳ್ಳಿಗಳ ಸುತ್ತ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಇದರ ವಿರುದ್ಧ ರೈತರು ಸಿಡಿದೆದ್ದಿದ್ದು, ತಮ್ಮ ಜಮೀನು ಉಳಿಸಿಕೊಳ್ಳಲು ಹೋರಾಟ ನಡೆಸಿದ್ದರು. ದೇವನಹಳ್ಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಿಲ್ಲಿಸುವಂತೆ ಅನ್ನದಾತರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು. ರೈತರ ಹೋರಾಟಕ್ಕೆ ನಟ ಪ್ರಕಾಶ್ ರೈ ಸಾಥ್ ನೀಡಿದ್ದರು. ರೈತರ ಪರ ಹಲವು ಹೋರಾಟಗಳನ್ನು ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಭಾಂಗಣದಲ್ಲಿ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತುಗಳು:

  • ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ.
  • ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು.
  • ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ.
  • ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ.
  • 1777 ಎಕ್ರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸ್ವಾಧೀನಪಡಿಸಿಕೊಂಡು, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು.
  • ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ.
  • ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ.
  • ಯಾವುದೇ ಕಾರಣಕ್ಕೂ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular