HomeLatest Newsಪ್ರಯಾಣಿಕರೇ ಗಮನಿಸಿ: ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ಆ. 5 ರಿಂದ ಬಸ್ ಸಂಚಾರದಲ್ಲಿ...

ಪ್ರಯಾಣಿಕರೇ ಗಮನಿಸಿ: ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ಆ. 5 ರಿಂದ ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 5 ರಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಬೇಡಿಕೆಗಳ ಈಡೇರಿಕೆ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.

ಸಮಿತಿ ಪದಾಧಿಕಾರಿಗಳೊಂದಿಗೆ ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದು, ನೌಕರರ ವೇತನ ಪರಿಷ್ಕರಣಿಯ 38 ತಿಂಗಳ ಹಿಂಬಾಕಿ ಪಾವತಿ ಸೇರಿ ಬೇಡಿಕೆಗಳ ಬಗ್ಗೆ ಮುಂದಿನ ಒಂದು ವಾರದೊಳಗೆ ಸಭೆ ನಡೆಸುವುದಾಗಿ ಭರವಸೆ ನೀಡಿದ್ದರು. ಇದಾಗಿ 12 ದಿನ ಕಳೆದರೂ ಸಭೆ ಕರೆದಿಲ್ಲ. ಹೀಗಾಗಿ ಮುಷ್ಕರಕ್ಕೆ ಕರೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2020ರ ಜನವರಿ 1ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ, 2024ರ ಜನವರಿ 1ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಬಗ್ಗೆ ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿತ್ತು. ಆದರೆ, ಇದುವರೆಗೂ ಬೇಡಿಕೆಗಳನ್ನು ಈಡೇರಿಸುವ ಕುರಿತು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಆಗಸ್ಟ್ 5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದೆ ಎಂದು ಜಂಟಿ ಕ್ರಿಯಾ ಸಮಿತಿಯ ಸಂಚಾಲಕ ಬಿ. ಜಯದೇವರಾಜೇ ಅರಸು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular