ಬೆಂಗಳೂರು : ಮಾಜಿ ಸಚಿವ ಕೆ.ಶಿವನಗೌಡ ನಾಯಕ್ ಅವರು ನವಿಲಿನ ಹಾರ ಧರಿಸಿರುವ ಫೋಟೋ ವೈರಲ್ ಆಗಿದ್ದು, ವಿವಾದದಲ್ಲಿ ಸಿಲುಕಿದ್ದಾರೆ.
ಈ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯಿದೆ ಉಲ್ಲಂಘನೆ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ರಾಷ್ಟ್ರಪಕ್ಷಿ ನವಿಲಿನ ಗರಿಯಿಂದ ತಯಾರಿಸಿದ ಹಾರವನ್ನು ಧರಿಸಿ ಸಾರ್ವಜನಿಕವಾಗಿ ಪ್ರದರ್ಶನ ಮಾಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ತಪ್ಪು ಸಂದೇಶ ಹೋಗುತ್ತದೆ. ಶಿವನಾಯಕ್ ವನ್ಯಜೀವಿ ಸಂರಕ್ಷಣಾ ಕಾಯಿದೆ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸುವಂತೆ ಅವರು ಆಗ್ರಹಿಸಿದ್ದಾರೆ.
You Might Also Like
TAGGED:ಕೆ.ಶಿವನಗೌಡ ನಾಯಕ್