HomeLatest NewsBREAKING : 'ಗಾಳಿ ಆಂಜನೇಯ' ದೇವಾಲಯ ಮುಜರಾಯಿ ಇಲಾಖೆ ಸುಪರ್ದಿಗೆ : ರಾಜ್ಯ ಸರ್ಕಾರದ ಕ್ರಮಕ್ಕೆ...

BREAKING : ‘ಗಾಳಿ ಆಂಜನೇಯ’ ದೇವಾಲಯ ಮುಜರಾಯಿ ಇಲಾಖೆ ಸುಪರ್ದಿಗೆ : ರಾಜ್ಯ ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ.!

ಬೆಂಗಳೂರು : ಗಾಳಿ ಆಂಜನೇಯ ದೇವಾಲಯ ಮುಜರಾಯಿ ಇಲಾಖೆ ಸುಪರ್ದಿಗೆ ನೀಡುವ ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಸರ್ಕಾರದ ಕ್ರಮ ಮೇಲ್ನೋಟಕ್ಕೆ ತಪ್ಪಾಗಿದೆ ಎಂದು ಅನಿಸುತ್ತಿಲ್ಲ. ಸರ್ಕಾರದ ಕ್ರಮ ಸರಿಯಾಗಿದೆ. ಇದರಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ ಎಂದು ಹೈಕೋರ್ಟ್ ಪೀಠ ಹೇಳಿದೆ. ಗಾಳಿ ಆಂಜನೇಯ ದೇವಾಲಯ ಮುಜರಾಯಿ ಇಲಾಖೆ ಸುಪರ್ದಿಗೆ ನೀಡುವ ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಪ್ರಕರಣದ ಹಿನ್ನೆಲೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ನಗರದ ಪ್ರಸಿದ್ಧ ಐತಿಹಾಸಿಕ ಗಾಳಿ ಆಂಜನೇಯ ದೇವಾಲಯವನ್ನು ರಾಜ್ಯ ಮುಜರಾಯಿ ಇಲಾಖೆ ತನ್ನ ಸುಪರ್ದಿಗೆ ಪಡೆದುಕೊಂಡಿದೆ. ಗಾಳಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಅವ್ಯವಹಾರ ನಡೆದ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವಶಕ್ಕೆ ತೆಗೆದುಕೊಳ್ಳಲಾಗಿದೆ. 5 ವರ್ಷದ ನಂತರ ದೇವಸ್ಥಾನದ ಆಡಳಿತ ಮಂಡಳಿ ಸುಪರ್ದಿಗೆ ವಹಿಸಲಾಗುವುದು. ಈ ವಿಚಾರವಾಗಿ ನ್ಯಾಯಾಲಯಕ್ಕೆ ಹೋಗುವವರು ಹೋಗಬಹುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದರು.

ಮೈಸೂರು ರಸ್ತೆಯ ಐತಿಹಾಸಿಕ ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಹುಂಡಿ ಹಣ ಎಣಿಕೆಯ ವೇಳೆ ಅಕ್ರಮ ನಡೆದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅಲ್ಲದೆ ದೇವಾಲಯದಲ್ಲಿ ಆಡಳಿತ ನಿರ್ವಹಣೆ ಸರಿ ಇಲ್ಲ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ವರದಿ ನೀಡುವಂತೆ ಸರ್ಕಾರ ಮುಜರಾಯಿ ಇಲಾಖೆಗೆ ಸೂಚನೆ ನೀಡಿತ್ತು. ಇದೀಗ ವರದಿ ಆಧಾರದಲ್ಲಿ ದೇವಾಲಯವನ್ನು ಮುಜರಾಯಿ ಇಲಾಖೆ ವಶಕ್ಕೆ ನೀಡಲಾಗಿದೆ ಎಂದು ಹೇಳಿದ್ದರು. ದೇವಾಲಯವನ್ನು ಸರ್ಕಾರದ ವಶಕ್ಕೆ ಪಡೆದ ಕ್ರಮವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ದೇವಾಲಯದ ಆಡಳಿತ ಮಂಡಳಿ ಸದಸ್ಯರು ತೀರ್ಮಾನಿಸಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular