ನವದೆಹಲಿ: ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಗೆ ಸಂಪುಟ ಅನುಮೋದನೆ ನೀಡಿದ್ದು, 100 ಜಿಲ್ಲೆಗಳ 1.7 ಕೋಟಿ ರೈತರಿಗೆ ಪ್ರಯೋಜನವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯನ್ನು ಆರು ವರ್ಷಗಳ ಕಾಲ ಜಾರಿಗೆ ತರಲು ಸಂಪುಟ ಅನುಮೋದನೆ ನೀಡಿದೆ. ಈ ಕಾರ್ಯಕ್ರಮವು ವಾರ್ಷಿಕ 24,000 ಕೋಟಿ ರೂ.ಗಳ ವೆಚ್ಚದಲ್ಲಿ 100 ಜಿಲ್ಲೆಗಳನ್ನು ಒಳಗೊಳ್ಳಲಿದೆ. ಕೇಂದ್ರ ಬಜೆಟ್ನಲ್ಲಿ ಘೋಷಿಸಲಾದ ಈ ಕಾರ್ಯಕ್ರಮವು ಅಸ್ತಿತ್ವದಲ್ಲಿರುವ 36 ಯೋಜನೆಗಳನ್ನು ಒಟ್ಟುಗೂಡಿಸುತ್ತದೆ ಮತ್ತು ಬೆಳೆ ವೈವಿಧ್ಯೀಕರಣ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಅಳವಡಿಕೆಯನ್ನು ಹೆಚ್ಚಿಸುತ್ತದೆ.
ಕೇಂದ್ರ ಸಚಿವ ಸಂಪುಟದಲ್ಲಿ ತೆಗೆದುಕೊಂಡ ನಿರ್ಧಾರದ ಬಗ್ಗೆ ವಿವರಗಳನ್ನು ಹಂಚಿಕೊಂಡ ಐ & ಬಿ ಸಚಿವ ಅಶ್ವಿನಿ ವೈಷ್ಣವ್, ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯು ಕೊಯ್ಲಿನ ನಂತರದ ಸಂಗ್ರಹಣೆಯನ್ನು ಹೆಚ್ಚಿಸುತ್ತದೆ, ನೀರಾವರಿ ಸೌಲಭ್ಯಗಳನ್ನು ಸುಧಾರಿಸುತ್ತದೆ ಮತ್ತು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.
ಈ ಕಾರ್ಯಕ್ರಮವು 1.7 ಕೋಟಿ ರೈತರಿಗೆ ಸಹಾಯ ಮಾಡುವ ಸಾಧ್ಯತೆಯಿದೆ. ಈ ಯೋಜನೆಯು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದು, ಬೆಳೆ ವೈವಿಧ್ಯೀಕರಣ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಹೆಚ್ಚಿಸುವುದು, ಕೊಯ್ಲಿನ ನಂತರದ ಸಂಗ್ರಹಣೆಯನ್ನು ಹೆಚ್ಚಿಸುವುದು, ನೀರಾವರಿ ಸೌಲಭ್ಯಗಳನ್ನು ಸುಧಾರಿಸುವುದು ಮತ್ತು ಸಾಲದ ಲಭ್ಯತೆಯನ್ನು ಸುಗಮಗೊಳಿಸುವ ಗುರಿಯನ್ನು ಹೊಂದಿದೆ.