HomeLatest Newsಧರ್ಮಸ್ಥಳ ಪ್ರಕರಣ: ಸಿಎಂ ಸಿದ್ದರಾಮಯ್ಯ ಭೇಟಿಯಾದ ವಕೀಲರ ನಿಯೋಗ, ಅಗತ್ಯ ಕ್ರಮಕ್ಕೆ ಮನವಿ

ಧರ್ಮಸ್ಥಳ ಪ್ರಕರಣ: ಸಿಎಂ ಸಿದ್ದರಾಮಯ್ಯ ಭೇಟಿಯಾದ ವಕೀಲರ ನಿಯೋಗ, ಅಗತ್ಯ ಕ್ರಮಕ್ಕೆ ಮನವಿ

ಬೆಂಗಳೂರು: ಹಿರಿಯ ವಕೀಲರಾದ ಬಾಲನ್ ಮತ್ತು ಡಾ. ಸಿ.ಎಸ್. ದ್ವಾರಕನಾಥ್ ಅವರ ನೇತೃತ್ವದ ವಕೀಲರ ನಿಯೋಗದವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧರ್ಮಸ್ಥಳ ಪ್ರಕರಣದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ವಕೀಲರ ನಿಯೋಗ ಅಗತ್ಯ ಕ್ರಮಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಿದೆ.

ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಸಿ.ಎಸ್. ದ್ವಾರಕನಾಥ್ ಅವರು, ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅತ್ಯಾಚಾರ, ಕೊಲೆ ಮತ್ತು ಶವಗಳನ್ನು ಹೂತು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದೆ. ಈಗಾಗಲೇ ಅಲ್ಲಿ ತನಿಖೆ ನಡೆಯುತ್ತಿದ್ದು, ಒಬ್ಬರು ದೂರು ಕೂಡ ನೀಡಿದ್ದಾರೆ. ಆ ವ್ಯಕ್ತಿಗೆ ಸೂಕ್ತ ರಕ್ಷಣೆ ನೀಡಬೇಕಿದೆ. ಆ ವ್ಯಕ್ತಿ ಹೇಳುವ ಜಾಗದಲ್ಲಿ ಪರಿಶೀಲನೆ ನಡೆಸಬೇಕಿದೆ. ಹೀಗಾಗಿ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular