HomeLatest Newsರಾಜ್ಯದ ಎಲ್ಲಾ ವಿವಿ, ಕಾಲೇಜುಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯ: ಉನ್ನತ ಶಿಕ್ಷಣ ಇಲಾಖೆ ಆದೇಶ

ರಾಜ್ಯದ ಎಲ್ಲಾ ವಿವಿ, ಕಾಲೇಜುಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯ: ಉನ್ನತ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಎಲ್ಲಾ ಸಾರ್ವಜನಿಕ, ಖಾಸಗಿ ವಿಶ್ವವಿದ್ಯಾಲಯಗಳು, ಸರ್ಕಾರಿ, ಖಾಸಗಿ, ಅನುದಾನಿತ ಪದವಿ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯಗೊಳಿಸಿ ಉನ್ನತ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಈಗಾಗಲೇ ರಾಜ್ಯದ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ ಮಾಡಿದ್ದ ಉನ್ನತ ಶಿಕ್ಷಣ ಇಲಾಖೆ ಇದೀಗ ಪದವಿ, ಪಾಲಿಟೆಕ್ನಿಕ್ ಕಾಲೇಜುಗಳಿಗೂ ವಿಸ್ತರಿಸಿದೆ.

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮಾದಕ ದ್ರವ್ಯ ವ್ಯಸನ, ರ್ಯಾಗಿಂಗ್, ಲೈಂಗಿಕ ದೌರ್ಜನ್ಯ ಸೇರಿ ಇನ್ನಿತರ ಅಕ್ರಮ, ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕೆ ಸಿಸಿಟಿವಿ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿವಿಗಳು ಹಾಗೂ ಕಾಲೇಜುಗಳ ಪ್ರಾಂಶುಪಾಲರು ಸಿಸಿಟಿವಿ ಅಳವಡಿಕೆ ಬಗ್ಗೆ ಕ್ರಮ ಕೈಗೊಳ್ಳಬೇಕು. ಅಳವಡಿಸಿದ ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆ ವಿವರಗಳನ್ನು ಜುಲೈ 21ರೊಳಗೆ ಮಾಹಿತಿ ಒದಗಿಸುವಂತೆ ಕಾಲೇಜ್ ಶಿಕ್ಷಣ ಇಲಾಖೆ ನಿರ್ದೇಶಕರು ಸೂಚಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular