HomeLatest NewsBIG NEWS : ನಟ ದರ್ಶನ್ ಗೆ ಇಂದು ಬಿಗ್ ಡೇ : 'ಸುಪ್ರೀಂಕೋರ್ಟ್'...

BIG NEWS : ನಟ ದರ್ಶನ್ ಗೆ ಇಂದು ಬಿಗ್ ಡೇ : ‘ಸುಪ್ರೀಂಕೋರ್ಟ್’ ನಲ್ಲಿ ಜಾಮೀನು ಭವಿಷ್ಯ ನಿರ್ಧಾರ |Actor Darshan

ಬೆಂಗಳೂರು : ನಟ ದರ್ಶನ್ ಗೆ ಇಂದು ಬಿಗ್ ಡೇ ಆಗಿದ್ದು, ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.

ಹೌದು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ ನಟ ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇಂದು ಕೊಲೆ ಆರೋಪಿಗಳ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಆರೋಪಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿತ್ತು. . ವಾದ ವಿವಾದ ಆಲಿಸಿದ ಕೋರ್ಟ್ ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಜಾಮೀನು ಆದೇಶವನ್ನು ರದ್ದುಗೊಳಿಸುವಂತೆ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಕೊಲೆ ಪ್ರಕರಣದಲ್ಲಿ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ. ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಡಿಸೆಂಬರ್ 2024ರಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಇಂದು ಮತ್ತೆ ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆ ನಡೆಸಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular