ಮಂಡ್ಯ: ಟ್ರ್ಯಾಕ್ಟರ್ ಹರಿದು ರಸ್ತೆ ಬದಿ ನಿಂತಿದ್ದ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆಯ ಎಪಿಎಂಸಿ ಮಾರುಕಟ್ಟೆಯ ಸಮೀಪ ನಡೆದಿದೆ.
ಕೆಆರ್ ಪೇಟೆ ಪಟ್ಟಣದ ನಿವಾಸಿ ಪ್ರವೀಣ(34) ಸ್ಥಳದಲ್ಲೇ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕೆಆರ್ ಪೇಟೆ ಪಟ್ಟಣ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.