ಕೊಪ್ಪಳ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಭಾರಿ ಮಳೆಯಿಂದಾಗಿ ಕೊಪ್ಪಳದಲ್ಲಿ ಮನೆ ಕುಸಿದು ಬಿದ್ದ ಪರಿಣಾಮ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಪ್ರಶಾಂತಿ ಮೃತ ಕಂದಮ್ಮ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹನುಮಂತಿ, ದುರಗಮ್ಮ, ಭೀಮಮ್ಮ, ಹುಸೇನಪ್ಪ, ಫಕೀರಪ್ಪ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಗಾವತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯಲ್ಲಿ ಬಾರಿ ಮಳೆಯಾಗುತ್ತಿದ್ದು, ಹಲವು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.