HomeLatest NewsBREAKING: 3,000 ರೂ. ಲಂಚಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ

BREAKING: 3,000 ರೂ. ಲಂಚಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ

ಶಿವಮೊಗ್ಗ: 3,000 ರೂಪಾಯಿ ಲಂಚ ಸ್ವೀಕರಿಸುತ್ತಿದಾಗ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕುಮಾರ್ ನಾಯ್ಕ್ ಲೋಕಾಯುಕ್ತ ಬಲೆಗೆ ಬಿದ್ದವರು. ಇ-ಸ್ವತ್ತು ನೀಡಲು ಕುಮಾರ್ ನಾಯ್ಕ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಶ್ರೀರಾಂಪುರದ ವಿನೋದ್ ಎಂಬುವವರಿಂದ ಲಂಚ ಪಡೆಯುತ್ತಿದ್ದ ವೇಳೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಕುಮಾರ್ ನಾಯ್ಕ್ ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular