ಬೆಂಗಳೂರು: ಮಾಲೂರು ಶಾಸಕ ಕೆ.ವೈ. ನಂಜೇಗೌಡರಿಗೆ ಜಾರಿ ನಿರ್ದೇಶನಾಲಯ(ಇಡಿ) ಶಾಕ್ ನೀಡಿದೆ. ಇಡಿಯಿಂದ 1.32 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ.
ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಮತ್ತು ಇತರರಿಗೆ ಸೇರಿದ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ. ಕೋಮುಲ್ ನೇಮಕಾತಿ ಹಗರಣ ಸಂಬಂಧ ಇಡಿ ದಾಳಿ ನಡೆಸಿದ್ದು, 2023ರಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. 1.32 ಕೋಟಿ ಮೌಲ್ಯದ ಸ್ಥಿರ ಚರ ಆಸ್ತಿ ಜಪ್ತಿ ಮಾಡಿರುವ ಬಗ್ಗೆ ಇಡಿ ಮಾಹಿತಿ ನೀಡಿದೆ.
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ(KOMUL) ನೇಮಕಾತಿ ಹಗರಣ, 2023ಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ, ಬೆಂಗಳೂರು ವಲಯ ಕಚೇರಿಯ ಇಡಿ, ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಮತ್ತು ಇತರರ 1.32 ಕೋಟಿ ರೂ.(ಅಂದಾಜು) ಮೌಲ್ಯದ ಸ್ಥಿರ ಮತ್ತು ಚರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ತಿಳಿಸಲಾಗಿದೆ.

