ಚಾಮರಾಜನಗರ: ಶೌಚಾಲಯಕ್ಕೆ ತೆರಳಿದ್ದಾಗ ಹೃದಯಾಘಾತದಿಂದ ಕುಸಿದುಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ.
60 ವರ್ಷದ ರಾಚಪ್ಪಾಜಿ ಮೃತಪಟ್ಟವರು ಎಂದು ಹೇಳಲಾಗಿದೆ. ಕಾಮಗೆರೆ ಗ್ರಾಮದ ರಾಚಪ್ಪಾಜಿ ಕೊಳ್ಳೆಗಾಲ ಬಸ್ ನಿಲ್ದಾಣಕ್ಕೆ ಬಂದಿದ್ದ ವೇಳೆ ಶೌಚಾಲಯಕ್ಕೆ ತೆರಳಿದ್ದಾರೆ. ಈ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಕೊಳ್ಳೇಗಾಲ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ಸ್ಥಳಾಂತರ ಮಾಡಲಾಗಿದೆ. ಕೊಳ್ಳೇಗಾಲ ಟೌನ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.