HomeLatest Newsನಮ್ಮ ಸರ್ಕಾರ ಸದಾ ಕನ್ನಡ ಸಾಹಿತ್ಯ, ಸಂಸ್ಕೃತಿಯ ಪರ: ಸಿಎಂ ಸಿದ್ಧರಾಮಯ್ಯ

ನಮ್ಮ ಸರ್ಕಾರ ಸದಾ ಕನ್ನಡ ಸಾಹಿತ್ಯ, ಸಂಸ್ಕೃತಿಯ ಪರ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಇರಲಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 2024-25ನೇ ಸಾಲಿನ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳನ್ನು ವಿತರಿಸಿ, ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಅವರು ಮಾತನಾಡಿದರು.

ಪ್ರಶಸ್ತಿಗಳನ್ನು ನಿರೀಕ್ಷಿಸದೇ ತಮ್ಮ ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುವ ಕೆಲಸವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಡುತ್ತಿದೆ. ಇದರ ಅಂಗವಾಗಿ 18 ಮಂದಿ ಸಾಧಕರಿಗೆ ಪ್ರಶಸ್ತಿ ನೀಡಿದ್ದೇವೆ. ಇದರಲ್ಲಿ ಮೂರು ಪ್ರಶಸ್ತಿಗೆ 10 ಲಕ್ಷ ರೂಪಾಯಿ ನೀಡಲಾಗುತ್ತಿದೆ, ಉಳಿದ ಪ್ರಶಸ್ತಿಗಳಿಗೆ 5 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಆದರೆ, ಪುರಸ್ಕೃತರ ಸಾಧನೆಗೆ ಈ ಹಣ ಸಮವಲ್ಲ, ಇದು ಕನ್ನಡ ಸಂಸ್ಕೃತಿಯ ಕೆಲಸಕ್ಕೆ ಕೊಡುವ ಗೌರವವಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಹಳ ಮಂದಿ ಸಂಸ್ಕೃತಿ ವಿಚಾರದಲ್ಲಿ ಸಾಧನೆ ಮಾಡುತ್ತಲೇ ಇರುತ್ತಾರೆ. 2,000 ವರ್ಷಗಳ ಇತಿಹಾಸ ಇರುವ ಕನ್ನಡದ ಸಾಂಸ್ಕೃತಿಕ ಸಂಪತ್ತು ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೇಳಿದ್ದಾರೆ.

ಕನ್ನಡ ಸಂಸ್ಕೃತಿ, ಸಾಹಿತ್ಯದ ಕೆಲಸದಲ್ಲಿ ನಮ್ಮ ಸರ್ಕಾರ ಹಿಂದೆ ಬೀಳುವುದಿಲ್ಲ. ಇನ್ನೂ ಹೆಚ್ಚಿನ ಪ್ರೋತ್ಸಾಹ ಕೊಡುವ ಕೆಲಸವನ್ನು ನಾವು ಮಾಡುತ್ತೇವೆ. ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಇರಲಿದೆ ಎಂದು ತಿಳಿಸಿದ್ದಾರೆ.

ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿದ್ದವನು ನಾನು. ನಾನು ಸಾಹಿತ್ಯದ ವಿದ್ಯಾರ್ಥಿ ಅಲ್ಲ, ಆದರೆ ಕನ್ನಡ ಸಾಹಿತ್ಯ, ಸಂಸ್ಕೃತಿಯನ್ನು ಅಪಾರವಾಗಿ ಪ್ರೀತಿಸುವವನು. ಕನ್ನಡ ಕರ್ನಾಟಕದಲ್ಲಿ ಸಾರ್ವಭೌಮ‌ ಭಾಷೆ ಆಗಬೇಕು ಎನ್ನುವ ದಿಕ್ಕಿನಲ್ಲಿ ಬೇಷರತ್ ಬದ್ಧತೆ ಇಟ್ಟುಕೊಂಡು ನಾನು ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular