ಬೆಂಗಳೂರು: ವೇತನ ಪರಿಷ್ಕರಣೆ, ಹಿಂಬಾಕಿ ನೀಡುವುದು ಸೇರಿದಂತೆ ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ.
ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್ಆರ್ಟಿಸಿ ಶಾಕ್ ನೀಡಿದೆ. ಪ್ರತಿಭಟನೆ ನಡೆಸದಂತೆ ಕೆಎಸ್ಆರ್ಟಿಸಿ ವತಿಯಿಂದ ಎಸ್ಮಾ ಜಾರಿ ಮಾಡಲಾಗಿದೆ.
ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ 2013ರ ಅಡಿ ಎಸ್ಮಾ ಜಾರಿ ಮಾಡಿದ್ದು, 5 ತಿಂಗಳು ಯಾವುದೇ ಮುಷ್ಕರದಲ್ಲಿ ಭಾಗಿಯಾಗದಂತೆ ಎಸ್ಮಾ ಜಾರಿಗೊಳಿಸಲಾಗಿದೆ. ಡಿಸೆಂಬರ್ 31ರವರೆಗೆ ನಿಗಮದಲ್ಲಿ ಮುಷ್ಕರ ನಿರ್ಬಂಧಿಸಿ ಅಧಿಸೂಚನೆ ಹೊರಡಿಸಲಾಗಿದೆ.