BIG NEWS: ರಾಜಧಾನಿ ಬೆಂಗಳೂರು ಆಡಳಿತ ವಿಕೇಂದ್ರೀಕರಣ: 5 ಮಹಾನಗರ ಪಾಲಿಕೆ ರಚನೆಗೆ ಸಂಪುಟ ಅಧಿಕೃತ ಮುದ್ರೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ ಬದಲಾಗಿರುವ ಬಿಬಿಎಂಪಿಯನ್ನು ಐದು ಮಹಾನಗರ ಪಾಲಿಕೆಗಳಾಗಿ ವಿಭಜಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಐದು ಮಹಾನಗರ ಪಾಲಿಕೆಗಳ ರಚನೆಗೆ ಅಧಿಕೃತ ಮುದ್ರೆ ಒತ್ತಲಾಗಿದೆ. ಬ್ರಾಂಡ್ ಬೆಂಗಳೂರಿನ ಸಮಗ್ರ ಅಭಿವೃದ್ಧಿ ಮತ್ತು ಸುಗಮ ಆಡಳಿತಕ್ಕಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅDIನದಲ್ಲಿ ಐದು ಸ್ವತಂತ್ರ ಮಹಾನಗರ ಪಾಲಿಕೆಗಳನ್ನು ರಚಿಸುವ ಪ್ರಸ್ತಾವನೆಗೆ ಸಂಪುಟ ಸಭೆ ಅನುಮೋದನೆ ನೀಡಿದೆ.

ಬೆಂಗಳೂರಿನ ಆಡಳಿತ ಸುಸೂತ್ರ ನಿರ್ವಹಣೆಗೆ ಆಡಳಿತ ವಿಕೇಂದ್ರೀಕರಣದ ಭಾಗವಾಗಿ ತಜ್ಞರ ಸಮಿತಿ, ವಿಧಾನಮಂಡಲ ಜಂಟಿ ಸದನ ಸಮಿತಿಯ ಶಿಫಾರಸಿನಂತೆ ಗರಿಷ್ಠ 7 ಮಹಾನಗರ ಪಾಲಿಕೆಗಳ ರಚನೆಗೆ ಅವಕಾಶ ಕಲ್ಪಿಸುವ ಕಾನೂನು ತಿದ್ದುಪಡಿ ಕಾಯ್ದೆ ಈಗಾಗಲೇ ಜಾರಿಯಾಗಿದೆ. ಇದರ ಮುಂದುವರಿದ ಭಾಗವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯೊಳಗೆ 5 ಮಹಾನಗರ ಪಾಲಿಕೆಗಳನ್ನು ರಚಿಸಲು ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡಿದೆ.

ಮಾರು 800 ಚ.ಕಿ.ಮೀ. ವ್ಯಾಪ್ತಿಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಭಜನೆಯ ಹಾದಿ ಸುಸೂತ್ರವಾಗಿದೆ. ಐದು ಪಾಲಿಕೆ ರಚನೆ ನಂತರ ಸುಮಾರು 10 ವರ್ಷಗಳ ನಂತರ ಚುನಾವಣೆ ನಡೆಯುವ ನಿರೀಕ್ಷೆ ಗರಿಗೆದರಿದೆ. ಈ ಹಿಂದೆ 2015 ರಲ್ಲಿ ಬಿಬಿಎಂಪಿ ಚುನಾವಣೆ ನಡೆದಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read