HomeLatest Newsಸಹಕಾರ ಸಂಘಗಳ ನಿಬಂಧಕರ ಆದೇಶ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಕಸಾಪ ಅಧ್ಯಕ್ಷ ಮಹೇಶ್ ಜೋಶಿ

ಸಹಕಾರ ಸಂಘಗಳ ನಿಬಂಧಕರ ಆದೇಶ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಕಸಾಪ ಅಧ್ಯಕ್ಷ ಮಹೇಶ್ ಜೋಶಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ 2023 -24 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆ ರದ್ದುಪಡಿಸಿ ಸಹಕಾರ ಸಂಘಗಳ ಉಪನಿಬಂಧಕರ ಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ ಆಕ್ಷೇಪಿಸಿದ್ದು, ಹೈಕೋರ್ಟ್ ಮೆಟ್ಟಿಲೇರಿದೆ.

ಕನ್ನಡ ಸಾಹಿತ್ಯ ಪರಿಷತ್ ವಾರ್ಷಿಕ ಸರ್ವ ಸದಸ್ಯರ ಸಭೆ ರದ್ದುಪಡಿಸಿ ಪದಾಧಿಕಾರಿಗಳ ಕಾರ್ಯವೈಖರಿ, ಅನುದಾನ ಖರ್ಚು ವೆಚ್ಚಗಳ ಕುರಿತು ವಿಚಾರಣೆ ನಡೆಸುವ ಸಹಕಾರ ಸಂಘಗಳ ಉಪನಿಬಂಧಕರ ಕ್ರಮವನ್ನು ಆಕ್ಷೇಪಿಸಲಾಗಿದೆ.

ಬೆಂಗಳೂರು ನಗರ ವಲಯ 2ರ ಸಹಕಾರ ಸಂಘಗಳ ಉಪನಿಬಂಧಕರು ಮತ್ತು ಸಂಘಗಳ ನೋಂದಣಿ ಅಧಿಕಾರಿ ಹೊರಡಿಸಿರುವ ಆದೇಶಗಳನ್ನು ರದ್ದುಪಡಿಸುವಂತೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಅರ್ಜಿ ಗುರುವಾರ ವಿಚಾರಣೆಗೆ ನಿಗದಿಯಾಗಿತ್ತು. ಕಲಾಪ ಮುಕ್ತಾಯದ ವೇಳೆ ಅರ್ಜಿದಾರ ಮಹೇಶ್ ಜೋಶಿ ಅವರ ಪರ ಹಿರಿಯ ವಕೀಲ ಎಂ. ಅರುಣ್ ಶಾಮ್ ಹಾಜರಾಗಿದ್ದರು.

ಸಾಯತ್ತ ಮತ್ತು ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ ವಿರುದ್ಧ ಅಧಿಕಾರ ವ್ಯಾಪ್ತಿ ಮೀರಿ ಸಹಕಾರ ಸಂಘಗಳ ಉಪನಿಬಂಧಕರು ಕ್ರಮ ಕೈಗೊಂಡಿದ್ದಾರೆ. ಅರ್ಜಿಯನ್ನು ತುರ್ತು ವಿಚಾರಣೆ ನಡೆಸಬೇಕಿದೆ ಎಂದು ಮನವಿ ಮಾಡಿದ್ದಾರೆ. ಸೋಮವಾರಕ್ಕೆ ಅರ್ಜಿ ವಿಚಾರಣೆ ಪರಿಗಣಿಸುವುದಾಗಿ ನ್ಯಾಯ ಪೀಠ ಹೇಳಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular