ಬೆಂಗಳೂರು : ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ ಪ್ರಮುಖ 40 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಯೊಡ್ಡಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಗರದ ವಿವಿಧ ಶಾಲೆಗಳನ್ನು ಗುರಿಯಾಗಿಸಿಕೊಂಡು ಕಿಡಿಗೇಡಿಗಳು ಬೆದರಿಕೆ ಇಮೇಲ್ ಕಳುಹಿಸಿದ್ದಾರೆ.
ಆರ್. ಆರ್ ನಗರ ಹಾಗೂ ಕೆಂಗೇರಿ ಸೇರಿದಂತೆ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆಯೊಡ್ಡಲಾಗಿದೆ.ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿಂದೆ ಕೂಡ ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು.
You Might Also Like
TAGGED:ಬಾಂಬ್ ಬೆದರಿಕೆ