ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆ ನಡೆದಿದ್ದು, ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವತಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಎನ್ ಎನ್ ಟಿ ಬಡಾವಣೆಯಲ್ಲಿ ನಡೆದಿದೆ.
ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆ ಕಡೂರು ಮೂಲದ ಯುವತಿ ಮೇಘನಾ (25) ಎಂದು ಗುರುತಿಸಲಾಗಿದೆ. ಕೆಲಸದ ನಿಮಿತ್ತ ಬೆಂಗಳೂರಿನ ಪಿಜಿಯಲ್ಲಿ ವಾಸವಿದ್ದ ಮೇಘನಾ ಸ್ನೇಹಿತ ಸತೀಶ್ ಮನೆಗೆ ಬಂದಿದ್ದಳು. ಸತೀಶ್ ಜೊತೆ ಮೇಘನಾ ಮದುವೆ ಪ್ರಸ್ತಾಪವಾಗಿತ್ತು.
ಈ ಹಿನ್ನೆಲೆ ಸ್ನೇಹಿತ ಸತೀಶ್ ನೋಡಲು ಮೇಘನಾ ಅವರ ಮನೆಗೆ ಹೋಗಿದ್ದಳು. ಈ ವೇಳೆ ಸ್ನಾನಕ್ಕೆ ಹೋದಾಗ ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವತಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ. . ಘಟನೆ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ. ಮನೆಯಲ್ಲಿ ಗ್ಯಾಸ್ ಗೀಸರ್ ಬಳಸುವ ಮುನ್ನ ಎಚ್ಚರ ವಹಿಸಿ.
You Might Also Like
TAGGED:ಗ್ಯಾಸ್ ಗೀಸರ್