ಹಾಸನ: ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದೆ. ಹಾಸನ ಜಿಲ್ಲೆಯಲ್ಲಿ ಮತ್ತೋರ್ವ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಅಡುಗೆ ಮನೆಯಲ್ಲಿಯೇ ಕುಸಿದು ಬಿದ್ದ ಮಹಿಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ದಮಯಂತಿ (57) ಮೃತ ಮಹಿಳೆ. ಹಾಸನದ ಜಯನಗರ ಬಡಾವಣೆ ನಿವಾಸಿ. ಮಗನಿಗೆ ಟೀ ಮಡಿಕೊಟ್ಟು ತಲೆ ಸುತ್ತಿಬರುತ್ತಿದೆ ಎಂದವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.
ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ದಮಯಂತಿ ಕೊನೆಯುಸಿರೆಳೆದಿದ್ದಾರೆ. ಕೆಲ ವರ್ಷಗಳಿಂದ ದಮಯಂತಿ ಬಿಪಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.