ರಾಂಚಿ: ಧಾರಾಕಾರ ಮಳೆಯಿಂದಾಗಿ ಸರ್ಕಾರಿ ಶಾಲೆಯ ಕಟ್ಟಡದ ಮೇಲ್ಛಾವಣಿ ಕುಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಜಾರ್ಖಂಡ್ ನ ರಾಂಚಿಯಲ್ಲಿ ಈ ದುರಂತ ಸಂಭವಿಸಿದೆ. ಪಿಸ್ಕ ಮೊರೆ ಪ್ರದೇಶದ ತಂಗ್ರಾ ತೋಲಿಯಲ್ಲಿ ಈ ಘಟನೆ ನಡೆದಿದೆ. ಸರ್ಕಾರಿ ಶಾಲೆಯ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದಿದೆ. ಅವಶೇಷಗಳಡಿ ಸಿಲುಕಿ ಓರ್ವ ಮೃತಪಟ್ಟಿದ್ದಾರೆ. ಮೂವರನ್ನು ರಕ್ಷಿಸಲಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಸೂರಜ್ ಭಾಟಿಯಾ (65) ಮೃತರು. ಮನೀಶ್ ಟಿರ್ಕೆ, ಪ್ರೀತಮ್ ಟಿರ್ಕೆ, ಮೋಟು ಒರೋನ್ ಗಾಯಾಳುಗಳು. ಶಾಲೆಯ ಕಟ್ಟಡದ ಆವರಣದಲ್ಲಿ ಮಲಗಿದ್ದ ವೇಳೆ ಈ ದುರಂತ ಸಂಭವಿಸಿದೆ.