ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಮಹಿಳೆ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಪೀಣ್ಯ ಎರಡನೇ ಹಂತದಲ್ಲಿ ಇಂದು ಬೆಳಿಗ್ಗೆ ಬಿಎಂಟಿಸಿ ಬಸ್ ಫುಟ್ ಪಾತ್ ಮೇಲೆ ನಿಂತಿದ್ದ ಐವರ ಮೇಲೆ ಹರಿದಿದ್ದು, ಬಳಿಕ ಕ್ಯಾಂಟಿನ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.
ತರಿಕೆರೆ ಮೂಲದ ಸುಮಾ (25) ಮೃತ ಮಹಿಳೆ. ಬೆಂಗಳೂರಿನಲ್ಲಿ ಬ್ಯಾಂಕ್ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು. ಗಾಯಾಳು ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಸಲ್ಮಾ ಸುಲ್ತಾನ್ ಎಂಬುವವರು ನಿಡಿರುವ ದೂರಿನ ಹಿನ್ನೆಲೆಯಲ್ಲಿ ಇದೀಗ ಬಸ್ ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.