HomeLatest NewsBREAKING: ಪಂಪ್ ಸೆಟ್ ದುರಸ್ತಿ ವೇಳೆಯಲ್ಲೇ ಘೋರ ದುರಂತ: ವಿದ್ಯುತ್ ಪ್ರವಹಿಸಿ ಮೂವರು ರೈತರು ಸಾವು

BREAKING: ಪಂಪ್ ಸೆಟ್ ದುರಸ್ತಿ ವೇಳೆಯಲ್ಲೇ ಘೋರ ದುರಂತ: ವಿದ್ಯುತ್ ಪ್ರವಹಿಸಿ ಮೂವರು ರೈತರು ಸಾವು

ಯಾದಗಿರಿ: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಮೂವರು ರೈತರು ಸಾವನ್ನಪ್ಪಿದ್ದಾರೆ.

ಜಮೀನಿನಲ್ಲಿ ಮೋಟಾರ್ ಪಂಪ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಮೃತಪಟ್ಟಿದ್ದಾರೆ. ಈರಪ್ಪ(40), ದೇವ(30), ಸುರೇಶ್(22) ಮೃತಪಟ್ಟವರು ಎಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನು ಕೆಂಭಾವಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸಮುದಾಯ ಆರೋಗ್ಯ ಕೇಂದ್ರದ ಮುಂದೆ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular