ಸಂಚಾರ ನಿಯಮ ಪಾಲಿಸದವರಿಗೆ ಶಾಕ್: ಟೋಯಿಂಗ್ ವ್ಯವಸ್ಥೆ ಮರು ಜಾರಿ

ಬೆಂಗಳೂರು: ಬೆಂಗಳೂರು ನಗರದಲ್ಲಿ ಟೋಯಿಂಗ್ ವ್ಯವಸ್ಥೆ ಮರು ಜಾರಿಗೊಳಿಸಲಾಗುವುದು. ಈ ಸಂಬಂಧ ತ್ವರಿತವಾಗಿ ಪೊಲೀಸರಿಗೆ ವಾಹನಗಳನ್ನು ನೀಡಲು ಬಿಬಿಎಂಪಿ ಒಪ್ಪಿಗೆ ನೀಡಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ರಾಜ್ಯ ಪೊಲೀಸ್ ಇಲಾಖೆ ಶುಕ್ರವಾರ ಆಯೋಜಿಸಿದ್ದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವರು ನಂತರ ಮಾತನಾಡಿದರು.

ನಗರದಲ್ಲಿ ಶೀಘ್ರವೇ ಟೋಯಿಂಗ್ ವ್ಯವಸ್ಥೆ ಜಾರಿಗೆ ಬರಲಿದೆ. ಜನ ಸಂಚಾರ ನಿಯಮ ಪಾಲಿಸುವುದಿಲ್ಲ, ರಸ್ತೆಯ ಎರಡೂ ಬದಿಯಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸುತ್ತಾರೆ. ಇದೇ ವಿಚಾರಕ್ಕೆ ನಿತ್ಯ ಗಲಾಟೆಗಳಾಗುತ್ತಿವೆ. ಈ ಹಿನ್ನೆಲೆಯಲ್ಲಿ ಟೋಯಿಂಗ್ ವ್ಯವಸ್ಥೆ ಮರು ಜಾರಿಗೆ ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ನಿಷೇಧಿತ ಪ್ರದೇಶದಲ್ಲಿ ನಿಲ್ಲಿಸಿದ ವಾಹನಗಳನ್ನು ತೆರವುಗೊಳಿಸಲಾಗುವುದು. ಪೊಲೀಸರೇ ಟೋಯಿಂಗ್ ನಡೆಸಲಿದ್ದಾರೆ. ಟೋಯಿಂಗ್ ಮಾಡಲು ಮಹಾನಗರ ಪಾಲಿಕೆಯಿಂದ ಹೊಸದಾಗಿ ವಾಹನ ನೀಡುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತರು ತಿಳಿಸಿದ್ದಾರೆ ಎಂದು ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read