ಆ. 11ರಿಂದ 22 ರವರೆಗೆ ರಾಜ್ಯ ವಿಧಾನ ಮಂಡಲ ಅಧಿವೇಶನ

ಬೆಂಗಳೂರು: ಆಗಸ್ಟ್ 11 ರಿಂದ 22 ವರೆಗೆ ರಾಜ್ಯ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ನಡೆಯಲಿದೆ. ಮಳೆಗಾಲದ ವಿಧಾನ ಮಂಡಲ ಅಧಿವೇಶನ ನಡೆಯುವ ಬಗ್ಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಈ ಸಂಬಂಧ ರಾಜ್ಯಪಾಲ ಥಾವರ ಚಂದ್ ಗೆಹ್ಲೊಟ್ ಶುಕ್ರವಾರ ಅಧಿಸೂಚನೆ ಹೊರಡಿಸಿದ್ದಾರೆ. ಇದರ ಬೆನ್ನಲ್ಲೇ ಕಾರ್ಯ ಕಲಾಪಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 9 ದಿನಗಳು ಕಲಾಪ ನಡೆಯಲಿದೆ.

ಆಗಸ್ಟ್ 11ರಂದು ಅಧಿವೇಶನ ಆರಂಭವಾಗಲಿದೆ. ಮೊದಲ ವಾರ ಆಗಸ್ಟ್ 14ರ ವರೆಗೆ ನಡೆಯಲಿದೆ. ಆಗಸ್ಟ್ 15ರಂದು ಸ್ವಾತಂತ್ರ್ಯ ದಿನ ನಂತರ ಶನಿವಾರ ಮತ್ತು ಭಾನುವಾರ ರಜೆಯ ಕಾರಣ ಈ ಮೂರು ದಿನಗಳ ಕಾಲ ಕಲಾಪ ನಡೆಯುವುದಿಲ್ಲ. ಆಗಸ್ಟ್ 18ರಿಂದ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ಪುನಾರಾರಂಭವಾಗಲಿದ್ದು, ಆಗಸ್ಟ್ 22ರ ಶುಕ್ರವಾರದವರೆಗೆ ನಡೆಯಲಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read