ಕನ್ನಡ ಎಂಎ ವಿದ್ಯಾರ್ಥಿಗಳಿಗೆ ತಲಾ 25 ಸಾವಿರ ರೂ. ವಿದ್ಯಾರ್ಥಿ ವೇತನ ಮಂಜೂರು

ಬೆಂಗಳೂರು: ನೆರೆ ರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಎಂಎ ವ್ಯಾಸಂಗ ಮಾಡುತ್ತಿರುವ 102 ವಿದ್ಯಾರ್ಥಿಗಳಿಗೆ ತಲಾ 25 ಸಾವಿರ ರೂ.ಗಳಂತೆ ವಿದ್ಯಾರ್ಥಿ ವೇತನ ಮಂಜೂರು ಮಾಡಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಅನುದಾನ ಕೊರತೆಯಿಂದ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಲಾಗಿತ್ತು. ಈ ಬಾರಿ ಅನುದಾನ ಕೊರತೆ ನಡುವೆ 2024- 25 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿದ್ಯಾರ್ಥಿಯನ್ನು ವೇತನ ಮಂಜೂರು ಮಾಡಲು ಕ್ರಮ ವಹಿಸಲಾಗಿದೆ ಎಂದು ಹೇಳಿದ್ದಾರೆ.

ಕೇರಳ ಕೇಂದ್ರೀಯ ವಿವಿಯ 21 ವಿದ್ಯಾರ್ಥಿಗಳು, ಕಾಸರಗೋಡು ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ 27 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಮಹಾರಾಷ್ಟ್ರದ ಸೊಲ್ಲಾಪುರ ಪುಣ್ಯಶ್ಲೋಕ ಅಹಲ್ಯಾದೇವಿ ಹೋಳ್ಕರ್ ವಿವಿಯ 25 ವಿದ್ಯಾರ್ಥಿಗಳು, ಸೊಲ್ಲಾಪುರದ ಸಿ.ಬಿ. ಖೇಡಗಿ ಬಸವೇಶ್ವರ ಮಹಾವಿದ್ಯಾಲಯದ 23 ವಿದ್ಯಾರ್ಥಿಗಳು, ಮುಂಬೈ ವಿವಿಯ ಇಬ್ಬರು, ಕುಪ್ಪಂನ ದ್ರಾವಿಡ ವಿವಿಯ ಮೂವರು ವಿದ್ಯಾರ್ಥಿಗಳು, ಚೆನ್ನೈನ ಮದ್ರಾಸ್ ವಿವಿಯ ಒಬ್ಬರು ಸೇರಿ 102 ವಿದ್ಯಾರ್ಥಿಗಳಿಗೆ ರಲಾ 25,000 ರೂ.ಗಳಂತೆ ಒಟ್ಟು 25.50 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗಿದ್ದು, ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read