ಬಾಗಲಕೋಟೆ: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ, ಹೋರಾಟಗಳನ್ನು ನಡೆಸುತ್ತಿದ್ದ ಕೋಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅನಾರೋಗ್ಯ ಹಿನ್ನೆಲೆಯಲ್ಲಿ ಬಾಗಲಕೋಟೆಯ ಕೆರೋಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸ್ವಾಮೀಜಿಗಳು ತಲೆನೋವು, ವಾಂತಿ, ಎದೆನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿ ತುರ್ತು ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.