ಬೆಂಗಳೂರು : ಕರ್ನಾಟಕದ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ ಮಾಡಿದರು.
ಇಂದು ರಾಜಭವನದ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.
ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ವಿಭು ಬಖ್ರು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ನೂತನ ನ್ಯಾಯಮೂರ್ತಿಗಳಿಗೆ ಶುಭ ಕೋರಿದರು.ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರು ಪ್ರಮಾಣ ವಚನ ಬೋಧಿಸಿದ ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಭಾಪತಿಗಳಾದ ಬಸವರಾಜ ಹೊರಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

