ನಿಯಾಮಿ: ನೈಋತ್ಯ ನೈಜರ್ ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಭಾರತೀಯರು ಸಾವನ್ನಪ್ಪಿದ್ದು, ಓರ್ವನನ್ನು ಅಪಹರಿಸಲಾಗಿದೆ ಎಂದು ತಿಳಿದುಬಂದಿದೆ.
ನೈಜರ್ ಡೆಸೋ ಪ್ರದೇಶದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಭಾರತಿಯರನ್ನು ಹತ್ಯೆಗೈದಿದ್ದಾರೆ. ಓರ್ವನನ್ನು ಅಪಹರಿಸಿದ್ದಾರೆ ಎಂದು ಇಲ್ಲಿನ ಭಾರತೀಯ ರಾಯಭಾರ ಕಚೇರಿ ಮಾಹಿತಿ ನೀಡಿದೆ.
ರಾಜಧಾನಿ ನಿಯಾಮಿಯಿಂದ 130 ಕಿ.ಮೀ ದೂರದಲ್ಲಿರುವ ಡೊಸೊದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರ ಕಾವಲು ಕಾಯುತ್ತಿದ್ದ ಸೇನ ಅಘಟಕದ ಮೇಲೆ ಅಪರಿಚಿತ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ಮೃತದೇಹಗಳನ್ನು ಸ್ವದೇಶಕ್ಕೆ ರವಾನಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ರಾಯಭಾರ ಕಚೇರಿ ತಿಳಿಸಿದೆ.