ಹಾಸನ: ಎರಡು ಕಾರ್ ಗಳು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಮೀನಾಕ್ಷಿ ಮತ್ತು ಪ್ರತಾಪ್ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಎರಡು ಕಾರ್ ಗಳು ಸಂಪೂರ್ಣ ಜಖಂ ಆಗಿವೆ. ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನರಾಯಪಟ್ಟಣ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.