ಬೆಂಗಳೂರು: ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಪತ್ತೆಯಾದರೆ ಮಾಲೀಕರಿಗೆ ದಂಡ ವಿಧಿಸಲಾಗುವುದು. ಬಿಬಿಎಂಪಿಯ ಪೂರ್ವ ವಲಯ ವ್ಯಾಪ್ತಿಯ ಖಾಳಿ ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹವಾಗಿದ್ದಲ್ಲಿ ಕೂಡಲೇ ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ನಿವೇಶನ ಮಾಲೀಕರಿಗೆ ನೋಟಿಸ್ ನೀಡಿ ದಂಡ ವಿಧಿಸುವಂತೆ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪೂರ್ವ ವಲಯ ಆಯುಕ್ತರ ಕಚೇರಿಯಲ್ಲಿ ಸಾರ್ವಜನಿಕರ ಕೊಂದು ಕೊರತೆ ಸ್ವೀಕಾರ ಕಾರ್ಯಕ್ರಮದಲ್ಲಿ ಹೆಚ್.ಆರ್.ಬಿ.ಆರ್. ಲೇಔಟ್ ನ ಖಾಲಿ ನಿವೇಶನಗಳಲ್ಲಿ ಘನ ತ್ಯಾಜ್ಯ, ಕಟ್ಟಡ ತ್ಯಾಜ್ಯ ಶೇಖರಣೆಯಾಗಿದ್ದು, ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರೊಬ್ಬರು ದೂರಿದ್ದಾರೆ.
ಇದನ್ನು ಗಂಭೀರವಾಗಿ ಪರಿಗಣಿಸಿದ ಸ್ನೇಹಲ್ ಅವರು, ಪೂರ್ವ ವಲಯ ವ್ಯಾಪ್ತಿಯ ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಮತ್ತು ಕಟ್ಟಡ ಅವಶೇಷ ಸಂಗ್ರಹವಾಗಿದ್ದಲ್ಲಿ ಮಾಲೀಕರಿಗೆ ನೋಟಿಸ್ ನೀಡಿ ದಂಡ ವಿಧಿಸುವಂತೆ ತಿಳಿಸಿದ್ದಾರೆ.