ಚಿತ್ರದುರ್ಗ: ಒಳ ಮೀಸಲಾತಿ ಜಾರಿಗೊಳಿಸದಿದ್ದರೆ ರಾಜ್ಯ ಬಂದ್ ಮಾಡಲಾಗುವುದು ಎಂದು ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪು ನೀಡಿ ಆಗಸ್ಟ್ 1ಕ್ಕೆ ಒಂದು ವರ್ಷ ಪೂರ್ಣವಾಗುತ್ತದೆ. ಅಷ್ಟರೊಳಗೆ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸಬೇಕು. ಇಲ್ಲದಿದ್ದರೆ ಮಾದಿಗ ಸಮಾಜದ ಒಕ್ಕೂಟಗಳಿಂದ ರಾಜ್ಯ ಬಂದ್ ಮಾಡಲಾಗುವುದು ಎಂದು ಹೇಳಿದ್ದಾರೆ.
ಮೂರು ದಶಕಗಳ ಹೋರಾಟದಿಂದ ದಣಿದಿದ್ದು, ನಮ್ಮ ಸಹನೀಯ ಕಟ್ಟೆ ಒಡೆದಿದೆ. ಈಗ ನಾವು ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಿದೆ. ಎಂದು ಹೇಳಿದ್ದಾರೆ.