ಬೆಂಗಳೂರು: ಈ ಹಿಂದೆ 2021 ರಲ್ಲಿ ನಡೆದ 402 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿದ್ದು, ಆಯ್ಕೆಯಾದವರಿಗೆ ಶೀಘ್ರವೇ ನೇಮಕಾತಿ ಆದೇಶ ಪತ್ರ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ನಾನಾ ಕಾರಣಗಳಿಂದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನನೆಗುದಿಗೆ ಬಿದ್ದಿದೆ. ಈ ನಡುವೆ 2021ರಲ್ಲಿ 402 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಡಿ 381 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಈ ಆಯ್ಕೆ ಪ್ರಕ್ರಿಯೆ ಸಂಬಂಧ ಇದುವರೆಗೆ ಯಾವುದೇ ವಿವಾದವಿಲ್ಲ. ಹೀಗಾಗಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿದರೆ ಈ ಹಿಂದಿನ ಅಧಿಸೂಚನೆ ಅನ್ವಯ ಆಯ್ಕೆಯಾಗಬಹುದಾದ ಅಭ್ಯರ್ಥಿಗಳ ಜೇಷ್ಠತೆ ಹಾಗೂ ವಲಯಗಳನ್ನು ಹೊರತುಪಡಿಸಿ ಹೆಚ್ಚಿನ ವ್ಯತ್ಯಾಸ ಉಂಟಾಗುವುದಿಲ್ಲ. 402 ಪಿಎಸ್ಐ ಹುದ್ದೆಗೆ ಆಯ್ಕೆಯಾದವರಿಗೆ ಶೀಘ್ರವೇ ನೇಮಕಾತಿ ಪತ್ರ ವಿತರಿಸಬೇಕು ಎಂದು ಮನವಿ ಮಾಡಿದ್ದಾರೆ.