ಕೊಪ್ಪಳ: ಮಹರ್ಷಿ ವಾಲ್ಮೀಕಿ ನಿಗಬದಲ್ಲಿ ಬಹುಕೋಟಿ ಅಕ್ರಮ ಪ್ರಕರಣದ ಮಾದರಿಯಲ್ಲಿಯೇ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ಕೊಪ್ಪಳ ವಿಭಾಗದಲ್ಲಿಯೂ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.
ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ಕೊಪ್ಪಳ ವಿಭಾಗದಲ್ಲಿ ಬರೋಬ್ಬರಿ 72 ಕೋಟಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಇಬ್ಬರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.
2019 ರಿಂದ 2025ರವರೆಗೆ ಕೊಪ್ಪಳ ಜಿಲ್ಲೆಯ ವಿವಿಧೆಡೆ ನಡೆದ 96 ಕಾಮಗಾರಿಗಳಲ್ಲಿ ಅಂದಿನ ಇಇ ಆಗಿದ್ದ ಝಡ್ ಎಂ ಚಿಂಚೋಳಿಕರ್ ಹಾಗೂ ಹೊರಗುತ್ತಿಗೆ ನೌಕರನಾಗಿದ್ದ ಕಳಕಪ್ಪ ನಿಡಗುಂದಿ ಎಂಬುವವರು 72 ಕೋಟಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.