ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ. 211(ಎ), ಬಿ.ಎನ್.ಎಸ್ ಅಡಿಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಇದರ ಸಂಬಂಧ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಬಹುದಾದ ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಲಾಗಿದೆ.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಪತ್ರದಲ್ಲಿ ಧರ್ಮಸ್ಥಳದ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ. ದಿನಾಂಕ: 12-07-2025ರಂದು ಟೈಮ್ಸ್ ನೌ ಮತ್ತಿತರ ಮಾಧ್ಯಮಗಳು ಮನುಷ್ಯರೊಬ್ಬರ ತಲೆಬುರುಡೆ ದೊರಕಿದ ಬಗ್ಗೆ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದವರ ಹೇಳಿಕೆಯ ವರದಿ ಪ್ರಸಾರವಾಗಿರುವುದನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ.
ಈ ಮಾಧ್ಯಮ ವರದಿ ಮತ್ತು ಶವಗಳನ್ನು ಹೂತಿರುವ ವ್ಯಕ್ತಿಯ ಹೇಳಿಕೆಯಲ್ಲಿ ಕಳೆದ 20ಕ್ಕೂ ಹೆಚ್ಚು ವರ್ಷ ಗಂಭೀರ ಸ್ವರೂಪದ ದೌರ್ಜನ್ಮ, ಹತ್ಯೆ, ಅತ್ಯಾಚಾರ, ಅಸ್ವಾಭಾವಿಕವಾದ ಸಾವು ಮತ್ತು ನಾಪತ್ತೆ ಪ್ರಕರಣಗಳು ಹಲವು ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಬಗ್ಗೆ ತಿಳಿಸಲಾಗಿದೆ. ಹಾಗಾಗಿ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕವಾದ ಸಾವು/ಕೊಲೆ ಪ್ರಕರಣಗಳು ಮತ್ತು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸುವಂತೆ ಕೋರಿರುತ್ತಾರೆ.
ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ. ಪ್ರಣವ್ ಮೊಹಾಂತಿ ಮುಖ್ಯಸ್ಥರಾಗಿರುವ ವಿಶೇಷ ತನಿಖಾ ತಂಡದ ಸದಸ್ಯರಾಗಿ ನೇಮಕಾತಿ ಉಪ ಪೊಲೀಸ್ ಮಹಾನಿರೀಕ್ಷಕ ಎಂ.ಎನ್. ಅನುಚೇತ್, ಸಿಎಆರ್ ಕೇಂದ್ರ ಸ್ಥಾನ ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ, ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಸದಸ್ಯರಾಗಿದ್ದಾರೆ.
ಮೇಲೆ ಓದಲಾದ (2)ರಂತೆ, ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಯನ್ನು ಕೈಗೊಳ್ಳಲು ಒಂದು ವಿಶೇಷ ತನಿಖಾ ತಂಡ (Special Investigation Team)ವನ್ನು ರಚಿಸುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿ ಸರ್ಕಾರ ಎಸ್ಐಟಿ ರಚಿಸಿ ಆದೇಶಿಸಿದೆ.
ಮೇಲ್ಕಂಡ ಪ್ರಕರಣವೂ ಸೇರಿದಂತೆ ಹಾಗೂ ಇದರ ಸಂಬಂಧ ಕರ್ನಾಟಕ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ / ದಾಖಲಾಗುವ ಇತರೆ ಎಲ್ಲಾ ಕ್ರಿಮಿನಲ್ ಪ್ರಕರಣಗಳ(Special Investigation Team) ವರ್ಗಾಯಿಸುವುದು ಹಾಗೂ ವಿಶೇಷ ತನಿಖಾ ತಂಡಕ್ಕೆ ಅವಶ್ಯವಿರುವ ಇತರೆ ಅಧಿಕಾರಿ /ಸಿಬ್ಬಂದಿಗಳನ್ನು ಒದಗಿಸುವುದು. ಈ ವಿಶೇಷ ತನಿಖಾ ತಂಡವು (Special Investigation Team) ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಳ್ಳುವುದು.
ವಿಶೇಷ ತನಿಖಾ ತಂಡವು ತನಿಖೆಗೆ ಸಂಬಂಧಿಸಿದ ತನಿಖಾ ಪ್ರಗತಿಯನ್ನು ಆಗಿಂದಾಗ್ಗೆ ಡಿಜಿ ಮತ್ತು ಐಜಿಪಿ ರವರಿಗೆ ವರದಿ ಮಾಡುವುದು.
ವಿಶೇಷ ತನಿಖಾ ತಂಡವು ಮೇಲ್ಕಂಡಂತೆ ದಾಖಲಾಗಿರುವ ಪ್ರಕರಣ ಹಾಗೂ ಇದರ ಸಂಬಂಧ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗುವ ಎಲ್ಲಾ ಪ್ರಕರಣಗಳ ಸಮಗ್ರ ತನಿಖೆಯನ್ನು ನಡೆಸಿ, ತನಿಖಾ ವರದಿಯನ್ನು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರು, ಬೆಂಗಳೂರು ರವರ ಮುಖಾಂತರ ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸತಕ್ಕದ್ದು ಎಂದು ಹೇಳಲಾಗಿದೆ.
ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ. ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ,… pic.twitter.com/IKnnStXzeZ
— Siddaramaiah (@siddaramaiah) July 20, 2025

