HomeLatest NewsRAIN ALERT: ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

RAIN ALERT: ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಈ ನಡುವೆ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು, ರಾಮನಗರ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ಜಿಲ್ಲೆಗಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular