ವಿಧಾನಸಭೆಯಲ್ಲಿ ರೈತರ ಸಮಸ್ಯೆ ಚರ್ಚಿಸುವಾಗ ರಮ್ಮಿ ಆಡಿದ ಕೃಷಿ ಸಚಿವ…!

ನಾಗ್ಪುರ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕೃಷಿ ಸಚಿವ ಮಾಣಿಕ್ ರಾವ್ ಕೊಕಾಟೆ ಅವರು ಮೊಬೈಲ್ ನಲ್ಲಿ ರಮ್ಮಿ ಆಡುತ್ತಿದ್ದರು ಎನ್ನುವ ಆರೋಪ ಕೇಳಿ ಬಂದಿದೆ.

ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್ ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದು, ಆಡಳಿತರೂಢ ಮಹಾಯುತಿ ಮೈತ್ರಿಕೂಟ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ರೈತರು ಸೇರಿದಂತೆ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿದಿನ ಎಂಟು ಜನ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಯಾವುದೇ ಕೆಲಸವಿಲ್ಲದ ಕೃಷಿ ಸಚಿವರು ರಮ್ಮಿ ಆಡುವುದರಲ್ಲಿ ನಿರತರಾಗಿದ್ದಾರೆ ಎಂದು ಟೀಕಿಸಿದ್ದಾರೆ.

ವಿಧಾನಸಭೆಯಲ್ಲಿ ಸಚಿವರು ಫೋನ್‌ನಲ್ಲಿ ಆಟ ಆಡುತ್ತಿರುವ ವಿಡಿಯೋ ತೋರಿಸಿ ರೋಹಿತ್ ಪವಾರ್ ಎನ್‌ಸಿಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎನ್‌ಸಿಪಿ ನಾಯಕ ಮತ್ತು ರಾಜ್ಯ ಕೃಷಿ ಸಚಿವ ಕೊಕಾಟೆ ಅವರು ರಾಜ್ಯ ವಿಧಾನಸಭೆಯಲ್ಲಿ ತಮ್ಮ ಮೊಬೈಲ್ ಫೋನ್‌ನಲ್ಲಿ ಆಟ ಆಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದು, ಆಡಳಿತ ಎನ್‌ಸಿಪಿ ಬಣವು ಬಿಜೆಪಿಯನ್ನು ಸಂಪರ್ಕಿಸದೆ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿಯೇ ಕೃಷಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳು ಬಾಕಿ ಉಳಿದಿವೆ. ರಾಜ್ಯದಲ್ಲಿ ಪ್ರತಿದಿನ ಎಂಟು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ, ಯಾವುದೇ ಕೆಲಸವಿಲ್ಲದ ಕೃಷಿ ಸಚಿವರಿಗೆ ರಮ್ಮಿ ಆಡಲು ಸಮಯವಿದೆ ಎಂದು ತೋರುತ್ತದೆ ಎಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read