ಚೆನ್ನೈ: ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿ ಪತಿಯೊಂದಿಗೆ ನಡೆದ ಜಗಳದಲ್ಲಿ ಗಾಯಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 27 ವರ್ಷದ ಮಹಿಳೆಯನ್ನು ಭಾನುವಾರ ಪತಿಯೇ ಇರಿದು ಕೊಂದಿದ್ದಾನೆ.
ಶ್ರುತಿ ಪಟ್ಟವರ್ತಿಯ ವಿಶ್ರುತ್ ಅವರನ್ನು ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದರು. ಶನಿವಾರ ವಿಶ್ರುತ್ ಜೊತೆ ನಡೆದ ಜಗಳದಲ್ಲಿ ಶ್ರುತಿ ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಭಾನುವಾರ ಬೆಳಿಗ್ಗೆ ವಿಶ್ರುತ್ ಆಸ್ಪತ್ರೆಗೆ ಪ್ರವೇಶಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಶ್ರುತಿಗೆ ಮೂರು ಬಾರಿ ಇರಿದು ಪರಾರಿಯಾಗಿದ್ದಾನೆ. ಈ ಘಟನೆಯಿಂದ ಆಸ್ಪತ್ರೆಯಲ್ಲಿದ್ದ ರೋಗಿಗಳು, ಸಹಾಯಕರು ಮತ್ತು ಆಸ್ಪತ್ರೆ ಸಿಬ್ಬಂದಿ ಆಘಾತಕ್ಕೊಳಗಾಗಿದ್ದಾರೆ. ಕುಳಿತಲೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.