HomeLive NewsBREAKING: ಕೃಷಿ ಹೊಂಡದಲ್ಲಿ ಮುಳುಗಿ ತಂದೆ, ಮಗ ಸಾವು

BREAKING: ಕೃಷಿ ಹೊಂಡದಲ್ಲಿ ಮುಳುಗಿ ತಂದೆ, ಮಗ ಸಾವು

ಬೆಳಗಾವಿ: ಕೃಷಿ ಹೊಂಡದಲ್ಲಿ ಮುಳುಗಿ ತಂದೆ, ಮಗ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ನಡೆದಿದೆ.

ಬಸವರಾಜ ಕೆಂಗೇರಿ(40), ಧರೆಪ್ಪ(14) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತರು ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ನಿವಾಸಿಗಳಾಗಿದ್ದಾರೆ.

ಬಸವರಾಜ ಪತ್ನಿ ಊರಲ್ಲಿ ಜಮೀನಿಗೆ ಕೀಟನಾಶಕ ಸಿಂಪಡಿಸಲು ಹೋಗಿದ್ದರು. ಕೃಷಿಹೊಂಡದಲ್ಲಿ ನೀರು ತರಲು ಹೋಗಿ ಬಾಲಕರು ಬಿದ್ದಿದ್ದಾರೆ. ಧರೆಪ್ಪ ಮತ್ತು ಬಾಗಪ್ಪ ಕಾಲು ಜಾರಿ ಬಿದ್ದಿದ್ದಾರೆ. ತಕ್ಷಣ ಇಬ್ಬರ ರಕ್ಷಣೆಗೆ ಬಸವರಾಜ ಧಾವಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರು ಬಾಗಪ್ಪನನ್ನು ರಕ್ಷಣೆ ಮಾಡಿದ್ದಾರೆ. ಹೊಂಡದಲ್ಲಿ ಮುಳುಗಿ ಬಸವರಾಜ ಮತ್ತು ಧರೆಪ್ಪ ಸಾವನ್ನಪ್ಪಿದ್ದಾರೆ. ಬಾಗಪ್ಪನನ್ನು ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular