BIG NEWS: ಇಂದಿನಿಂದ ಸಂಸತ್ ‘ಮುಂಗಾರು ಅಧಿವೇಶನ’ ಆರಂಭ: ಸರ್ಕಾರ ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಸಜ್ಜು

ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಒಂದು ತಿಂಗಳ ಕಾಲ ನಡೆಯಲಿದೆ.

ಅಧಿವೇಶನದಲ್ಲಿ ಪಹಲ್ಗಾಂ ದಾಳಿ, ಆಪರೇಷನ್ ಸಿಂಧೂರ, ಏರ್ ಇಂಡಿಯಾ ವಿಮಾನ ದುರಂತ, ಬಿಹಾರ ಮತದಾರರ ಪಟ್ಟಿ ಸೇರಿ ಇತರೆ ವಿಷಯಗಳ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಸಜ್ಜಾಗಿವೆ.

ಪಹಲ್ಗಾಂ ದಾಳಿ, ಆಪರೇಷನ್ ಸಿಂದೂರ, ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಬಗ್ಗೆ ಪ್ರಧಾನಿ ಮೋದಿ ಅಧಿವೇಶನದಲ್ಲಿ ಸ್ಪಷ್ಟನೆ ನೀಡಬೇಕೆಂದು ಸರ್ವಪಕ್ಷ ಸಭೆಯಲ್ಲಿ ವಿಪಕ್ಷಗಳು ಒತ್ತಾಯಿಸಿವೆ. ಸರ್ಕಾರ ಕೂಡ ಪ್ರತಿಪಕ್ಷಗಳ ಆರೋಪಕ್ಕೆ ತಕ್ಕ ಪ್ರತಿಕ್ರಿಯೆ ನೀಡಲು ಕಾರ್ಯತಂತ್ರ ರೂಪಿಸಿದೆ.

ಅಧಿವೇಶನದಲ್ಲಿ ಪ್ರಧಾನಿ ಮೋದಿ ಅವರಿಂದ ಉತ್ತರಕ್ಕೆ ವಿಪಕ್ಷಗಳು ಪಟ್ಟು ಹಿಡಿಯುವ ಸಾಧ್ಯತೆ ಇದೆ. ಮೋದಿಯವರ ಬದಲಾಗಿ ವಿದೇಶಾಂಗ ಸಚಿವರು, ರಕ್ಷಣಾ ಸಚಿವರು, ಗೃಹ ಸಚಿವರು ವಿಪಕ್ಷಗಳಿಗೆ ಉತ್ತರ ನೀಡುವ ಸಾಧ್ಯತೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read