ನವದೆಹಲಿ: ಸಣ್ಣ ಮಕ್ಕಳನ್ನು ವಾಹನದಲ್ಲಿ ಕರೆದುಕೊಂಡು ಹೋಗುವಾಗ ಸಂಚಾರ ನಿಯಮ ಉಲ್ಲಂಘಿಸಿದರೆ ದುಪ್ಪಟ್ಟು ದಂಡ ವಿಧಿಸಲು ಸಾರಿಗೆ ಸಚಿವಾಲಯ ಚಿಂತನೆ ನಡೆಸಿದೆ.
ಮಕ್ಕಳನ್ನು ವಾಹನದಲ್ಲಿ ಕರೆದೊಯ್ಯುವವರು ಸಂಚಾರ ನಿಯಮ ಉಲ್ಲಂಘಿಸಿ ಅಪಘಾತಕ್ಕೆ ಒಳಗಾಗುವುದನ್ನು ತಪ್ಪಿಸುವ ಉದ್ದೇಶದಿಂದ ಸಂಚಾರ ನಿಯಮ ಉಲ್ಲಂಘಿಸುವಂತಹ ವಾಹನಗಳ ಚಾಲಕರಿಗೆ ದುಪ್ಪಟ್ಟು ದಂಡ ವಿಧಿಸುವ ಬಗ್ಗೆ ರಸ್ತೆ ಸಾರಿಗೆ ಸಚಿವಾಲಯ ಚಿಂತನೆ ನಡೆಸಿದೆ.
ಇದರೊಂದಿಗೆ ಎಲ್ಲಾ ಚಾಲಕರಿಗೆ ಸಂಚಾರ ನಿಯಮಗಳ ಅನುಸರಣೆ ಅಥವಾ ಉಲ್ಲಂಘನೆ ಆದರೆ ಧನಾತ್ಮಕ ಅಥವಾ ಋಣಾತ್ಮಕ ಅಂಕಗಳನ್ನು ನೀಡುವ ಪದ್ದತಿ ಆರಂಭಿಸಲು ಕೂಡ ಉದ್ದೇಶಿಸಲಾಗಿದೆ. ಮಕ್ಕಳನ್ನು ಕರೆದುಕೊಂಡು ವಾಹನ ಚಾಲನೆ ಮಾಡುವ ಪೋಷಕರು, ಶಾಲಾ ಬಸ್ ಗಳ ಚಾಲಕರನ್ನು ರಸ್ತೆ ನಿಯಮ ಉಲ್ಲಂಘಿಸುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.
ನಿರ್ದಿಷ್ಟ ಸಂಖ್ಯೆಗಿಂತ ಹೆಚ್ಚು ಬಾರಿ ಸಂಚಾರ ನಿಯಮ ಉಲ್ಲಂಘಿಸಿದವರ ಚಾಲನಾ ಪರವಾನಿಗೆ ರದ್ದತಿ, ಧನಾತ್ಮಕ ಅಂಕ ಪಡೆದವರಿಗೆ ವಿಮಾ ಪ್ರೀಮಿಯಂ ಕಡಿತ ಮಾಡುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಚಾಲನಾ ಪರವಾನಿಗೆ ನವೀಕರಣ ಮಾಡುವಾಗ ಪರೀಕ್ಷೆ ಕಡ್ಡಾಯಗೊಳಿಸುವ ಕುರಿತು ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.