ಕಾರವಾರ: ಖಾಸಗಿ ಬಸ್ ಹಳ್ಳಕ್ಕೆ ಬಿದ್ದು ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಅಂಕೋಲ ತಾಲೂಕಿನ ಅಗಸೂರು ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಘಟನೆ ನಡೆದಿದೆ.
ಬಸ್ ನಲ್ಲಿದ್ದ 25 ಪ್ರಯಾಣಿಕರ ಪೈಕಿ 18 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಹಳ್ಳಕ್ಕೆ ಬಿದ್ದು ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಂಕೋಲಾ ಠಾಣೆಯ ಪಿಎಸ್ಐ ಉದ್ದಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಮಾರ್ಗವಾಗಿ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಅಂಕೋಲ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.