ಕಾರವಾರ: ವರುಣಾರ್ಭಟಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹಳ್ಳಕ್ಕೆ ಬಿದ್ದಿದ್ದು, ಘಟನೆಯಲ್ಲಿ ಓರ್ವ ಪ್ರಯಾಣಿಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರಿನಲ್ಲಿ ನಡೆದಿದೆ.
ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ ಬಸ್ ನಲ್ಲಿ ಸಿಲುಕಿದ್ದ ಓರ್ವ ಪ್ರಯಾಣಿಕ ಬಸ್ ನಲ್ಲಿಯೇ ಸಾವನ್ನಪ್ಪಿದ್ದಾರೆ. ಉಳಿದ 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ರಕ್ಷಣಾ ಕಾರ್ಚಾರಣೆ ನಡೆಸಲಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ದುರಂತ ಸಂಭವಿಸಿದೆ. ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಏಕಾಏಕಿ ಹಳ್ಳಕ್ಕೆ ಉರುಳಿ ಬಿದ್ದಿದೆ. ಬಸ್ ಒಳಗೆ ಸಿಲುಕಿದ್ದ ಪ್ರಯಾಣಿಕನ ಶವವನ್ನು ಕ್ರೇನ್ ಮೂಲಕ ಹೊರ ತೆಗೆಯಲಾಗಿದೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.