ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, E.D ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಇಡಿ ಅಧಿಕಾರಿಗಳ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್ ಹಂಚಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.
‘ED’ ಯನ್ನ ರಾಜಕೀಯ ಹೋರಾಟಕ್ಕೆ ಬಳಸಿಕೊಳ್ಳಬೇಡಿ
ED ಯನ್ನ ರಾಜಕೀಯ ಹೋರಾಟಕ್ಕೆ ಬಳಸಿಕೊಳ್ಳಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ ತೆಗೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ವಿರುದ್ಧದ ಹಣ ವರ್ಗಾವಣೆ ಪ್ರಕರಣವನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಜಾರಿ ನಿರ್ದೇಶನಾಲಯ (ED) ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ನ ತೀರ್ಪನ್ನು ಎತ್ತಿಹಿಡಿದಿದೆ ಮತ್ತು ED ಯ ಕ್ರಮಗಳ ಹಿಂದಿನ ಉದ್ದೇಶಗಳನ್ನು ಪ್ರಶ್ನಿಸಿದೆ, “ಮತದಾರರ ನಡುವೆ ರಾಜಕೀಯ ಯುದ್ಧಗಳು ನಡೆಯಲಿ… ಅದಕ್ಕಾಗಿ ನಿಮ್ಮನ್ನು ಏಕೆ ಬಳಸಲಾಗುತ್ತಿದೆ?” ಎಂದು ಟೀಕಿಸಿದೆ.

