ನವದೆಹಲಿ: ಸುಳ್ಳು ಸುದ್ದಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಅರ್ಜಿ ವಜಾಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ರೈತನ ಆತ್ಮಹತ್ಯೆ ಕುರಿತು ಸುಳ್ಳು ಸುದ್ದಿ ಹರಿಬಿಟ್ಟಿದ್ದ ಆರೋಪಕ್ಕೆ ಸಂಅಬ್ಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಧಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಸುಪ್ರೀಮ್ ಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಹಾಗೂ ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರಿದ್ದ ಪೀಠ ರಾಜ್ಯ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿದೆ. ಪ್ರಕರಣವನ್ನು ರಾಜಕೀಯಗೊಳಿಸಬಾರದು ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೇ ಸಿಜೆಐ ಗವಾಯಿ ಇಂತಹ ಸಮರ ನ್ಯಾಯಾಲಯದ ಹೊರಗೆ ನಡೆಯಲಿ ಎಂದಿದ್ದಾರೆ.