ಸೆಲ್ಪಿ ವಿಡಿಯೋ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರ್ಯಾಗಿಂಗ್’ ಗೆ ಹೆದರಿ ಈತ ಆತ್ಮಹತ್ಯೆಕೊಂಡಿರುವ ಶಂಕೆ ವ್ಯಕ್ತವಾಗಿದೆ.
22 ವರ್ಷದ ಅರುಣ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ರ್ಯಾಗಿಂಗ್ ಬಗ್ಗೆ ಹೇಳಿ ವಿಡಿಯೋ ಮಾಡಿಟ್ಟು ನೇಣಿಗೆ ಶರಣಾಗಿದ್ದಾನೆ. ಈತ ಆರ್ಕಿಟೆಕ್ಚರ್ ವಿದ್ಯಾರ್ಥಿಯಾಗಿದ್ದು, ಟಾಪರ್ ಆಗಿದ್ದನು . ಕಾಲೇಜು ವಾಟ್ಸಾಪ್ ಗ್ರೂಪ್ ನಲ್ಲಿ ವಿಡಿಯೋ ಹರಿಬಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿ ಹಾಸನದ ಚನ್ನಕೇಶವ ಹಾಗೂ ತುಳಸಿ ದಂಪತಿಯ ಮಗ ಅರುಣ್ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ನಂದರಾಮಯ್ಯನ ಪಾಳ್ಯದಲ್ಲಿ ವಾಸವಾಗಿದ್ದನು. ಈ ಬಗ್ಗೆ ಮಾದನಾಯಕನಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
TAGGED:ಸೆಲ್ಪಿ ವಿಡಿಯೋ