ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವಿರುದ್ ನಗರ ಜಿಲ್ಲೆಯ ಶಿವಕಾಶಿಯಲ್ಲಿ ನಡೆದಿದೆ.
ಇಲ್ಲಿನ ನಾರಾಯಣಪುರಂನಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ತಂಡ, ರಕ್ಷಣಾ ತಂಡ ದೌಡಾಯಿಸಿದ್ದು, ಫ್ಯಾಕ್ಟರಿಯಲ್ಲಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.