ಬೆಂಗಳೂರು: DCET-25 ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಚಾಯ್ಸ್ ಆಯ್ಕೆ ಮಾಡಲು, ಚಲನ್ ಡೌನ್ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಲು ಜುಲೈ 22ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
ಜು.22ರಂದು ಬೆಳಿಗ್ಗೆ 11 ಗಂಟೆವರೆಗೆ ಚಾಯ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಅದೇ ದಿನ ಮಧ್ಯಾಹ್ನ 2 ಗಂಟೆವರೆಗೆ ಶುಲ್ಕ ಪಾವತಿಗೆ, ಸಂಜೆ 5.30ರೊಳಗೆ ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.
ಚಾಯ್ಸ್ 1 ಮತ್ತು 2 ಆಯ್ಕೆ ಮಾಡಿಕೊಂಡವರು ಮಾತ್ರ ಚಲನ್ ಡೌನ್ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಬೇಕು. ಚಾಯ್ಸ್ -1 ದಾಖಲಿಸಿದವರು ಮಂಗಳವಾರವೇ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
#DCET-25 ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಛಾಯ್ಸ್ ಆಯ್ಕೆ ಮಾಡಲು, ಚಲನ್ ಡೌನ್ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಲು ಜುಲೈ 22ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) July 21, 2025
ಜು.22ರಂದು ಬೆಳಿಗ್ಗೆ 11 ಗಂಟೆವರೆಗೆ ಛಾಯ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಅದೇ ದಿನ ಮಧ್ಯಾಹ್ನ 2 ಗಂಟೆವರೆಗೆ ಶುಲ್ಕ ಪಾವತಿಗೆ, ಸಂಜೆ 5.30ರೊಳಗೆ… pic.twitter.com/u5ExauqfTD