HomeLatest Newsಸ್ವಾಮೀಜಿಯನ್ನು ಉಚ್ಛಾಟನೆ ಮಾಡಲು ಕಾಶಪ್ಪನವರ ಯಾರು..? ಇದೇನು ರಾಜಕೀಯ ಪಕ್ಷವೇ..?: ಯತ್ನಾಳ್ ಪ್ರಶ್ನೆ

ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲು ಕಾಶಪ್ಪನವರ ಯಾರು..? ಇದೇನು ರಾಜಕೀಯ ಪಕ್ಷವೇ..?: ಯತ್ನಾಳ್ ಪ್ರಶ್ನೆ

ವಿಜಯಪುರ: ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಅಂತ್ಯಕಾಲ ಬಂದಿದೆ. ದೀಪ ಆರುವ ಮೊದಲು ಜೋರಾಗಿ ಉರಿಯುತ್ತದೆ. ಅದೇ ರೀತಿ ಕಾಶಪ್ಪನವರ ಮಾಡುತ್ತಿದ್ದಾರೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ವಿಜಯಾನಂದ ಕಾಶಪ್ಪನವರ ಹಿಂದೆ ಪಂಚಮಸಾಲಿ ಸಮಾಜದವರು ಯಾರೂ ಇಲ್ಲ. ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಸೇರಿ ಯಾವುದೇ ಪಕ್ಷಕ್ಕೆ ಸೇರಿದವರಲ್ಲ. ಸ್ವಾಮೀಜಿಯವರನ್ನು ಉಚ್ಛಾಟನೆ ಮಾಡಲು ಕಾಶಪ್ಪನವರ ಯಾರು? ಇದೇನು ರಾಜಕೀಯ ಪಕ್ಷವೇ ಎಂದು ಪ್ರಶ್ನಿಸಿದ್ದಾರೆ.

ಸಮುದಾಯಕ್ಕಾಗಿ ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೋರಾಟ ನಡೆಸುತ್ತಿದ್ದಾರೆ. ಇಡೀ ಸಮಾಜ ಅವರ ಹಿಂದೆ ಇದೆ. ಬಿಜೆಪಿ ಸರ್ಕಾರದಲ್ಲಿ ಜಾರಿಗೆ ತಂದ, ಡಿ2 ಪ್ರವರ್ಗ ಸ್ವಾಮೀಜಿ ಹೋರಾಟದ ಫಲವಾಗಿದೆ ಎಂದು ಯತ್ನಾಳ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular