HomeLatest Newsನಿರುದ್ಯೋಗಿ ಯುವಕ-ಯುವತಿಯರಿಗೆ ಗುಡ್ ನ್ಯೂಸ್ : ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ

ನಿರುದ್ಯೋಗಿ ಯುವಕ-ಯುವತಿಯರಿಗೆ ಗುಡ್ ನ್ಯೂಸ್ : ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಕಂಪ್ಯೂಟರೈಸ್ಡ್‌ ಅಕೌಂಟಿಂಗ್(ಟ್ಯಾಲಿ) ಕುರಿತ 38 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್ 23 ರಿಂದ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ ಅನ್ನು ಕಡ್ಡಾಯವಾಗಿ ಹೊಂದಿರಬೇಕು.

ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‌ ಸಂಖ್ಯೆ: 9380162042, 9481506564, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಶಾಖೆಯ ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular